ಪುತ್ತೂರು : ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ; ಓರ್ವನಿಗೆ ಜಾಮೀನು
ಪ್ರಜ್ವಲ್
ಪುತ್ತೂರು: ಇಲ್ಲಿನ ಖಾಸಗಿ ಪದವಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಅದೇ ಕಾಲೇಜ್ನ ಐವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿಗೆ ಹೈಕೋರ್ಟ್ ಜಾಮಿನು ಮಂಜೂರುಗೊಳಿಸಿದೆ.
ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಪ್ರಜ್ವಲ್ (19) ಜಾಮೀನು ಪಡೆದ ಆರೋಪಿ.
ಕಳೆದ ಮಾರ್ಚ್ ನಲ್ಲಿ ಆರೋಪಿ ವಿದ್ಯಾರ್ಥಿಗಳಾದ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಗಾಣದ ಮೂಲೆ ನಿವಾಸಿ ಗುರುನಂದನ್ (19), ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಸುನಿಲ್ (19), ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಪ್ರಜ್ವಲ್ (19), ಪೆರ್ನೆ ಗ್ರಾಮದ ಕಡಂಬು ನಿವಾಸಿ ಕಿಶನ್ (19) ಮತ್ತು ಬರಿಮಾರು ಗ್ರಾಮದ ಬಲ್ಯ ನಿವಾಸಿ ಪ್ರಖ್ಯಾತ್ (19) ಎಂಬವರನ್ನು ಪೊಲೀಸರು ಬಂಧಿಸಿದ್ದರು.
ಆರೋಪಿ ವಿದ್ಯಾರ್ಥಿಗಳು ತಮ್ಮದೇ ಕಾಲೇಜ್ನ ವಿದ್ಯಾರ್ಥಿನಿಯನ್ನು ಮನೆಗೆ ತಲುಪಿಸುವುದಾಗಿ ಹೇಳಿ ಕಾರಿನಲ್ಲಿ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಠಾರ ಎಂಬಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಈ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಜುಲೈಯಲ್ಲಿ ಅತ್ಯಾಚಾರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಅರಿತ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಸುಮೊಟೋ ಕೇಸು ದಾಖಲಿಸಿದ್ದು, ಬಳಿಕ ವಿದ್ಯಾರ್ಥಿನಿ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಐವರು ವಿದ್ಯಾರ್ಥಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಇದೀಗ ಬಂಧಿತ ಐವರು ವಿದ್ಯಾರ್ಥಿಗಳ ಪೈಕಿ ಪ್ರಜ್ವಲ್ಗೆ ಹೈಕೋರ್ಟ್ ಜಾಮೀನು ಒದಗಿಸಿದ್ದು, ನಾಲ್ವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ಜಾಮೀನು ಅರ್ಜಿಯ ವಿಚಾರಣೆ ಮುಂದಿನ ವಾರ ಹೈಕೋರ್ಟ್ನಲ್ಲಿ ನಡೆಯಲಿದೆ.
ಆರೋಪಿಯ ಪರವಾಗಿ ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್ ಮತ್ತು ಮಹೇಶ್ ಕಜೆ ವಾದಿಸಿದ್ದರು.