ಕೊಂಕಣಿ ಕಂಠಪಾಠ ಸ್ಪರ್ಧೆ; ಅಶ್ವಿನಿ ಕಡ್ಲೆ ರಾಜ್ಯಮಟ್ಟಕ್ಕೆ ಆಯ್ಕೆ
ಭಟ್ಕಳ: ಸಿದ್ಧಾರ್ಥ ಆಂಗ್ಲ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಪಂಚವಟಿ ಶಿರಾಲಿಯ 6ನೇ ತರಗತಿಯ ವಿದ್ಯಾರ್ಥಿನಿ ಅಶ್ವಿನಿ ಸತೀಶ ಕಡ್ಲೆ ಹೊನ್ನಾವರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ಹಿರಿಯ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಈ ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಮತ್ತು ಎಲ್ಲಾ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
Next Story