ಕೋಟಿಲಿಂಗೇಶ್ವರ ದೇವಸ್ಥಾನ ಜಾತ್ರೆ: ಮದ್ಯ ಮಾರಾಟ ನಿಷೇಧ
ಉಡುಪಿ, ಡಿ.11: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೇಶ್ವರ ಗ್ರಾಮದ ಇತಿಹಾಸ ಪ್ರಸಿದ್ಧ ಕೋಟಿಲಿಂಗೇಶ್ಚರ ದೇವಸ್ಥಾನದ ರಥೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಡಿ.11ರಿಂದ 13ರವರೆಗೆ ನಡೆಯಲಿದ್ದು, ಈ ವೇಳೆ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ, ಶಾಂತಿ ಸುವ್ಯವಸ್ಥೆಗೆ ಭಂಗ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ, ಕುಂದಾಪುರ ಠಾಣಾ ವ್ಯಾಪ್ತಿ ಯ ಹಂಗಳೂರು, ಕೋಟೇಶ್ವರ, ಗೋಪಾಡಿ, ಬೀಜಾಡಿ ಗ್ರಾಮ ವ್ಯಾಪ್ತಿ ಪ್ರದೇಶದಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯ ಮಾರಾಟವನ್ನು ಡಿ.12ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಲಾಗಿದ್ದು, ಈ ಎಲ್ಲಾ ಗ್ರಾಮಗಳ ವ್ಯಾಪ್ತಿಯಲ್ಲಿ ಒಣ ದಿನವೆಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಜಿ.ಜದೀಶ್ ಆದೇಶ ಹೊರಡಿಸಿದ್ದಾರೆ.
Next Story