ಉಡುಪಿ: ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧದ ಪ್ರತಿಭಟನೆ ಡಿ.17ಕ್ಕೆ ಮುಂದೂಡಿಕೆ
ಉಡುಪಿ, ಡಿ.14: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಮತ್ತು ಸಹಭಾಗಿ ಸಂಘಟನೆಗಳ ವತಿಯಿಂದ ಡಿ.15ರಂದು ಅಜ್ಜರಕಾಡು ಹುತ್ಮಾತ ಸ್ಮಾರಕದ ಎದುರು ಹಮ್ಮಿಕೊಳ್ಳಲಾಗಿದ್ದ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧದ ಪ್ರತಿಭಟನೆಯನ್ನು ಮುಂದೂಡಲಾಗಿದೆ.
ಈ ಪ್ರತಿಭಟನೆಯನ್ನು ಡಿ.17ರಂದು ಸಂಜೆ ನಾಲ್ಕು ಗಂಟೆಗೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಎದುರು ನಡೆಸಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ಪ್ರಕಟಣೆ ತಿಳಿಸಿದೆ.
Next Story