59 ಚೀನಿ ಆ್ಯಪ್ ಗಳ ನಿಷೇಧ ‘ಡಿಜಿಟಲ್ ಸ್ಟ್ರೈಕ್’: ಕೇಂದ್ರ ಸಚಿವ ರವಿಶಂಕರ್ ಪ್ರಸಾದ್
ಹೊಸದಿಲ್ಲಿ: ಲಡಾಖ್ ನಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ ನಂತರ ಚೀನಾದ 59 ಆ್ಯಪ್ ಗಳನ್ನು ನಿಷೇಧಿಸಿರುವುದು ‘ಡಿಜಿಟಲ್ ಸ್ಟ್ರೈಕ್’ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
“ದೇಶದ ಜನರ ಡೇಟಾಗಳನ್ನು ರಕ್ಷಿಸುವ ಉದ್ದೇಶದಿಂದ ನಾವು ಚೀನಿ ಆ್ಯಪ್ ಗಳನ್ನು ಬ್ಯಾನ್ ಮಾಡಿದೆವು. ಇದು ಡಿಜಿಟಲ್ ಸ್ಟ್ರೈಕ್” ಎಂದು ರವಿಶಂಕರ್ ಪ್ರಸಾದ್ ಹೇಳಿದರು.
“ನಿಮಗೀಗ ಎರಡು ‘ಸಿ’ ಮಾತ್ರ ಕೇಳಬಹುದು. ಕೊರೋನ ವೈರಸ್ ಮತ್ತು ಚೀನಾ. ನಾವು ಶಾಂತಿಯಲ್ಲಿ ನಂಬಿಕೆ ಇರಿಸಿದ್ದೇವೆ ಮತ್ತು ಮಾತುಕತೆಗಳ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಬಯಸುತ್ತೇವೆ. ಆದರೆ ಯಾರಾದರೂ ಭಾರತದ ಮೇಲೆ ಕೆಟ್ಟ ದೃಷ್ಟಿ ಬೀರಿದರೆ, ನಾವು ಸೂಕ್ತ ಪ್ರತ್ಯುತ್ತರ ನೀಡುತ್ತೇವೆ. ನಮ್ಮ 20 ಯೋಧರು ಹುತಾತ್ಮರಾಗಿದ್ದರೆ, ಚೀನಾದ ಕಡೆ ಈ ಸಂಖ್ಯೆ ದುಪ್ಪಟ್ಟಾಗಲಿದೆ. ಅವರು ಯಾವುದೇ ನಿರ್ದಿಷ್ಟ ಸಂಖ್ಯೆಯನ್ನು ತಿಳಿಸುತ್ತಿಲ್ಲ ಎನ್ನುವುದು ನಿಮ್ಮ ಗಮನಕ್ಕೆ ಬಂದಿರಬಹುದು” ಎಂದು ಸಚಿವರು ಹೇಳಿದರು.
Next Story