ಬೆಂಗಳೂರಿನಲ್ಲಿ ಒಟ್ಟು 675 ಪೊಲೀಸರಲ್ಲಿ ಕೊರೋನ ಸೋಂಕು ದೃಢ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.17: ಲಾಕ್ಡೌನ್ ನಂತರವೂ ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಇಲ್ಲಿನ ಮಾಗಡಿ ರಸ್ತೆ, ಯಶವಂತಪುರ, ಕೋರಮಂಗಲ, ಶಿವಾಜಿನಗರ ಠಾಣೆ ಸೇರಿ 9 ಸಿಬ್ಬಂದಿಯಲ್ಲಿ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಸೋಂಕಿತರ ಸಂಪರ್ಕದಲ್ಲಿದ್ದ 55 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಠಾಣೆಗಳನ್ನು ತಾತ್ಕಲಿಕವಾಗಿ ಸೀಲ್ಡೌನ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಈವರೆಗೂ 675 ಪೊಲೀಸರಲ್ಲಿ ಸೋಂಕು ದೃಢವಾಗಿದ್ದು, 415 ಮಂದಿ ಗುಣಮುಖರಾಗಿದ್ದಾರೆ. ಸುಮಾರು 1,100 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. ಇದರಿಂದಾಗಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಎದುರಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
Next Story