ಮೀಟರ್ ಬಡ್ಡಿ ದಂಧೆ: ಮೂವರು ಆರೋಪಿಗಳ ಬಂಧನ
ಬೆಂಗಳೂರು, ಜು.24: ಸಾಲಕ್ಕೆ ಹೆಚ್ಚುವರಿ ಹಣ ನೀಡುವಂತೆ ಒತ್ತಡ ಹೇರಿ ಮೀಟರ್ ಬಡ್ಡಿ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾಟನ್ಪೇಟೆ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಬಾಬುಲಾಲ್ ಎಂಬುವರು ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪರವಾನಗಿ ಪಡೆದುಕೊಳ್ಳದೆ, ಜನರಿಗೆ ಸಾಲ ನೀಡಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದರು. ಸರಿಯಾಗಿ ಬಡ್ಡಿ ನೀಡದೆ ಹೋದರೆ ರೌಡಿಗಳಿಂದ ಸಾಲಗಾರರಿಗೆ ಬೆದರಿಕೆ ಹಾಕಿಸಿ ಹಣ ವಸೂಲಿ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story