ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯ ಆರೋಪ: ಮಹಿಳೆ ಮೃತ್ಯು
ಬೆಂಗಳೂರು, ಆ.2: 10 ದಿನಗಳ ಹಿಂದೆಯಷ್ಟೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎನ್ನಲಾದ ದಾರುಣ ಘಟನೆ ರವಿವಾರ ನಗರದಲ್ಲಿ ನಡೆದಿದೆ.
ನಗರದ ಕಾಮಾಕ್ಷಿಪಾಳ್ಯದ ನಿವಾಸಿಯಾಗಿರುವ ಮಹಿಳೆ 10 ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಪ್ರಾಥಮಿಕ ಚಿಕಿತ್ಸೆ ನಂತರ ಅವರನ್ನು ಮನೆಗೆ ಕಳಿಹಿಸಿಕೊಡಲಾಗಿತ್ತು.
ಮನೆಗೆ ಹೋದ ಕೆಲವೇ ಸಮಯದಲ್ಲಿ ತೀವ್ರ ಉಸಿರಾಟದ ಸಮಸ್ಯೆ ಕಂಡು ಬಂದಿದ್ದು, ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋಗಲಾಯಿತು. ಆದರೆ, ಮೂರ್ನಾಲ್ಕು ಗಂಟೆಗಳ ಕಾಲ ಖಾಸಗಿ ಆಸ್ಪತ್ರೆಗಳಿಗೆ ಅಲೆದ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಷ್ಟರಲ್ಲಿ ತಡವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
Next Story