ಮಾಜಿ ಸಚಿವ ಎಚ್.ಡಿ.ರೇವಣ್ಣರಿಗೆ ಕೊರೋನ ಪಾಸಿಟಿವ್
ಬೆಂಗಳೂರು, ಆ.28: ಹೊಳೆನರಸೀಪುರ ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಕೊರೋನ ಸೋಂಕು ತಗಲಿರುವ ವಿಷಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಖಚಿತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಾಜಿ ಸಚಿವ ಹಾಗೂ ಶಾಸಕ ರೇವಣ್ಣರಿಗೆ ಕೊರೋನ ಸೋಂಕು ದೃಢಪಟ್ಟಿರುವುದು ಬೇಸರದ ಸಂಗತಿ. ಅವರು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ.
ಎಚ್.ಡಿ.ರೇವಣ್ಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Next Story