ದ.ಕ. ಜಿಲ್ಲೆ : 51 ಮಂದಿಗೆ ಕೊರೋನ ಸೋಂಕು
ಮಂಗಳೂರು, ನ.2: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕು ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಸೋಮವಾರ 51 ಪಾಸಿಟಿವ್ ಪ್ರಕರಣಗಳೂ ವರದಿಯಾಗಿವೆ. ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದು, 121 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 30,392 ಸೋಂಕಿತರ ಪೈಕಿ 28,000 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ 679 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1,713 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
Next Story