ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾಗಲಿದೆ : ಯಡಿಯೂರಪ್ಪ
ಮಂಗಳೂರಿಗೆ ಆಗಮಿಸಿದ ಸಿಎಂ
ಮಂಗಳೂರು, ನ.4: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾಗಲಿದೆ, ಬಿಜೆಪಿ ಎರಡು ಕಡೆ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಸಂಜೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಆರ್. ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ , ಡಾ. ಭರತ್ ಶೆಟ್ಟಿ, ಸಂಜೀವ ಮಟಂದೂರು, ಉಮಾನಾಥ ಕೋಟ್ಯಾನ್ , ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಸಿ.ಎಂ.ವಾಸ್ತವ್ಯ
ಬೆಂಗಳೂರಿನಿಂದ ಮಂಗಳೂರು ಬಜ್ಪೆ ವಿಮಾನ ನಿಲ್ದಾಣಕ್ಕೆ ಬುಧವಾರ ರಾತ್ರಿ ವೇಳೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ತಂಗಲಿದ್ದಾರೆ. ಗುರುವಾರ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಉದ್ಘಾಟಿಸಲಿದ್ದಾರೆ.