ವಂಚನೆ ಪ್ರಕರಣ: ಬಂಧಿತ ಶಾಸಕ ಕಮರುದ್ದೀನ್ ಎರಡು ದಿನ ಪೊಲೀಸ್ ಕಸ್ಟಡಿಗೆ
ಕಾಸರಗೋಡು : ಫ್ಯಾಶನ್ ಜುವೆಲ್ಲರಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಶಾಸಕ ಎಂ. ಸಿ ಕಮರುದ್ದೀನ್ ನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಹೊಸದುರ್ಗ ನ್ಯಾಯಾಲಯ ತೀರ್ಪು ನೀಡಿದೆ.
ಕಮರುದ್ದೀನ್ ಸಲ್ಲಿಸಿರುವ ಜಾಮೀನು ಅರ್ಜಿ ಯ ವಿಚಾರಣೆ ಬುಧವಾರಕ್ಕೆ ಮುಂದೂಡಿದೆ. ಬೆಳಗ್ಗೆ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡರೂ ಕಸ್ಟಡಿಗೆ ಒಪ್ಪಿಸುವಂತೆ ತನಿಖಾ ತಂಡ ಅರ್ಜಿ ಸಲ್ಲಿಸಿದ್ದ ಹಿನ್ನಲೆಯಲ್ಲಿ ಎರಡು ದಿನಗಳ ವಿಚಾರಣೆ ಬಳಿಕ ಜಾಮೀನು ಅರ್ಜಿಯನ್ನು ಪರಿಗಣಿಸಲು ನ್ಯಾಯಾಲಯ ತೀರ್ಮಾನಿಸಿದೆ.
ಬುಧವಾರ ಸಂಜೆ 3 ಗಂಟೆಗೆ ಕಮರುದ್ದೀನ್ ನನ್ನು ಮತ್ತೆ ಹಾಜರು ಪಡಿಸಲು ನ್ಯಾಯಾಲಯ ಆದೇಶಿಸಿದೆ.
Next Story