ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ, ನ.10: ತಾಲೂಕಿನ ಪುತ್ತೂರು ಗ್ರಾಮದ ಸಂತೆಕಟ್ಟೆಯ ವಿಘ್ನೇಶ್ ಟವರ್ ಬಿಲ್ಡಿಂಗ್ನ ಹಿಂಬದಿಯಲ್ಲಿ ಸುಮಾರು 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.
ಮೃತದೇಹವನ್ನು ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತರ ವಾರಸುದಾರರು ಯಾರಾದರು ಇದ್ದಲ್ಲಿ ಉಡುಪಿ ನಗರ ಠಾಣೆ ಪಿಎಸ್ಐ ದೂರವಾಣಿ ಸಂಖ್ಯೆ: 0820-2520444, ಪೊಲೀಸ್ ವೃತ್ತ ನಿರೀಕ್ಷಕರು ದೂರವಾಣಿ ಸಂಖ್ಯೆ: 0820-2520329, ಉಡುಪಿ ಜಿಲ್ಲಾ ನಿಸ್ತಂತು ಕಚೇರಿ ದೂರವಾಣಿ ಸಂಖ್ಯೆ: 0820-2526444 ಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
Next Story