ಫ್ಲಾಟ್ನಲ್ಲಿ ಮಹಿಳೆಯ ಕೊಳೆತ ಮೃತದೇಹ ಪತ್ತೆ
ಕಾಪು, ಡಿ.7: ಕಾಪುವಿನ ವಸತಿ ಸಮುಚ್ಛಯದಲ್ಲಿ ಒಂಟಿಯಾಗಿ ವಾಸಿ ಸುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಾರದ ಬಳಿಕ ಇಂದು ಬೆಳಕಿಗೆ ಬಂದಿದೆ.
ಮೃತರನ್ನು ಪುತ್ತೂರಿನ ವಿದ್ಯಾ ಸರಸ್ವತಿ ಎಂದು ಗುರುತಿಸಲಾಗಿದೆ. ಇವರು ಕಾಪುವಿನ ಸಿಟಿ ಸೆಂಟರ್ ವಸತಿ ಸಮುಚ್ಛಯದಲ್ಲಿ ವಾಸ ಮಾಡಿ ಕೊಂಡಿದ್ದು, ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಗಿನ ಜಾವ ಅವರ ಫ್ಲಾಟ್ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ಪೋಲಿಸರಿಗೆ ತಿಳಿಸಿದರು.
ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದಾಗ ಮಹಿಳೆಯ ಮೃತದೇಹ ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ವಿದ್ಯಾ ಸರಸ್ವತಿ ಹೃದಯ ರೋಗದಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಪೋಲಿಸರು ಶಂಕಿಸಿದ್ದಾರೆ. ಮೃತದೇಹ ಹೊರತೆಗೆಯಲು ಸಮಾಜ ಸೇವಕ ಸೂರಿ ಶೆಟ್ಟಿ ಸಹಕರಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story