ಕಾಸರಗೋಡು : ಕಾಂಗ್ರೆಸ್ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ
ಕಾಸರಗೋಡು : ಕಾಂಗ್ರೆಸ್ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಪಡನ್ನಡದಲ್ಲಿ ಶನಿವಾರ ನಡೆದಿದೆ.
ಕೆಪಿಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ. ಫೈಝಲ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಮನೆಗೆ ಹಾನಿಯಾಗಿದೆ. ಕಿಟಿಕಿಯ ಗಾಜುಗಳು ಹೊಡೆದಿದ್ದು , ಗೋಡೆಗೆ ಹಾನಿಯಾಗಿದೆ. ಈ ಸಂದರ್ಭ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಬೈಕ್ ನಲ್ಲಿ ಬಂದ ತಂಡ ಈ ಕೃತ್ಯ ನಡೆಸಿರುವುದಾಗಿ ಚಂದೇರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.
Next Story