ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರಧನ ವಿತರಣೆ
ಮಂಗಳೂರು, ಡಿ.19: ಮಂಗಳೂರು ಬಂದರು ಉತ್ತರ ಧಕ್ಕೆ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಹಕಾರಿ ಸಂಘದ ವತಿಯಿಂದ ನಗರದ ಬಂದರ್‌ನಲ್ಲಿರುವ ಸೆಂಟ್ರಲ್ ಕಮಿಟಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಶ್ರೀರಕ್ಷಾ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 50 ಸಾವಿರ ರೂ. ಪರಿಹಾಧನದ ಚೆಕ್ ವಿತರಿಸಲಾಯಿತು. ಅಲ್ಲದೆ ಕಿಡ್ನಿ ಮತ್ತು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಧನಸಹಾಯ ವಿತರಿಸಲಾಯಿತು.
ಐಒಸಿ ನಿವೃತ್ತ ಅಧಿಕಾರಿ ಮೋಹನ್ ದಾಸ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್ ಮಾತನಾಡಿ ಲಾಕ್‌ಡೌನ್ ಸಂದರ್ಭ 25 ಲಕ್ಷ ರೂ. ಮೊತ್ತದ ಆಹಾರ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ನೊಂದವರ ಧ್ವನಿಯಾಗಿ ಕಾರ್ಯನಿರ್ವಹಿಸಿದೆ ಎಂದರು.
ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್, ಸಲಹೆಗಾರ ಪ್ರವೀಣ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಬ್ದುಲ್ಲತೀಫ್, ನಿರ್ದೇಶಕರಾದ ಯು.ಟಿ. ಅಹ್ಮದ್ ಶರೀಫ್, ಬಿ. ಇಬ್ರಾಹೀಂ, ಮುಹಮ್ಮದ್ ಅಶ್ರಫ್, ಎಂ.ಎ. ಗಫೂರ್, ಎಸ್.ಕೆ.ಇಸ್ಮಾಯಿಲ್, ಎಸ್.ಎಂ.ಇಬ್ರಾಹಿಂ, ಟಿ.ಎಚ್.ಹಮೀದ್, ಸುದತ್, ಬಿ.ಮುಹಮ್ಮದ್ ಶಾಲಿ, ಎ.ಎಂ.ಕೆ.ಮುಹಮ್ಮದ್ ಇಬ್ರಾಹಿಂ, ಬಿ.ಕೆ.ರಝಿಯಾ ಉಪಸ್ಥಿತರಿದ್ದರು.
ತಾಪಂ ಮಾಜಿ ಸದಸ್ಯ ಮುಹಮ್ಮದ್ ಮುಸ್ತಫಾ ಮಲಾರ್ ಕಾರ್ಯಕ್ರಮ ನಿರೂಪಿಸಿದರು.