ಉಡುಪಿ : ಕೇವಲ ಮೂರು ಮಂದಿಯಲ್ಲಿ ಕೊರೋನ ಸೋಂಕು ದೃಢ
ಉಡುಪಿ, ಡಿ.26: ಜಿಲ್ಲೆಯಲ್ಲಿ ಶನಿವಾರ ಕೇವಲ ಮೂರು ಮಂದಿಯಲ್ಲಿ ಮಾತ್ರ ಹೊಸದಾಗಿ ಕೋವಿಡ್ ಸೋಂಕು ಪತ್ತೆಯಾಗಿದೆ. 12 ಮಂದಿ ಚಿಕಿತ್ಸೆ ಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡರೆ, ಜಿಲ್ಲೆಯಲ್ಲಿ ಕೋವಿಡ್ಗೆ ಸಕ್ರಿಯರಾಗಿರುವವರ ಸಂಖ್ಯೆ 64ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದವರಲ್ಲಿ ಇಬ್ಬರು ಪುರುಷರು ಹಾಗೂ ಮಹಿಳೆ ಸೇರಿದ್ದಾರೆ. ಇವರಲ್ಲಿ ಪುರುಷರೊಬ್ಬರಲ್ಲಿ ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ. ಸೋಂಕು ಪತ್ತೆಯಾದವರಲ್ಲಿ ಇಬ್ಬರು ಉಡುಪಿ ತಾಲೂಕಿನವ ರಾದರೆ ಒಬ್ಬರು ಕುಂದಾಪುರ ತಾಲೂಕಿನವರು ಎಂದು ಡಾ.ಸೂಡ ತಿಳಿಸಿದರು.
12 ಮಂದಿ ಗುಣಮುಖ: ಶುಕ್ರವಾರ ಜಿಲ್ಲೆಯಲ್ಲಿ 12 ಮಂದಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮುಕ್ತರಾದವರ ಒಟ್ಟು ಸಂಖ್ಯೆ ಈಗ 22,754ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 64 ಮಂದಿ ಕೆವಿಡ್ಗೆ ಸಕ್ರಿಯರಿದ್ದಾರೆ ಎಂದರು.
1054 ನೆಗೆಟಿವ್: ಶುಕ್ರವಾರ ಒಟ್ಟು 1057 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1054 ಮಂದಿ ನೆಗೆಟಿವ್ ಫಲಿತಾಂಶ ಪಡೆದಿದ್ದಾರೆ. ಉಳಿದ ಮೂವರಲ್ಲಿ ಮಾತ್ರ ಸೋಂಕು ಪತ್ತೆಯಾಗಿದೆ. ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,006 ಆಗಿದೆ ಎಂದವರು ತಿಳಿಸಿದರು.
ಜಿಲ್ಲೆಯಲ್ಲಿ ಶುಕ್ರವಾರದವರೆಗೆ ಒಟ್ಟು 2,9,279 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 2,56,273 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಒಟ್ಟು 23,006 ಮಂದಿ ಪಾಸಿಟಿವ್ ಬಂದಿದ್ದರೆ, 22,754 ಮಂದಿ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 188 ಮಾತ್ರ ಎಂದು ಇಲಾಖೆ ತಿಳಿಸಿದೆ.