ಕಟಪಾಡಿ: ಕಾರುಗಳ ನಡುವೆ ಅಪಘಾತ; ಇಬ್ಬರಿಗೆ ಗಾಯ
ಉಡುಪಿ, ಜ.6: ಎರಡು ಕಾರುಗಳು ಢಿಕ್ಕಿ ಹೊಡೆದ ಪರಿಣಾಮ ಒಂದು ಕಾರು ಮಗುಚಿ ಬಿದ್ದು ಅದರಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಇಂದು ಅಪರಾಹ್ನ ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಹೋಗುತಿದ್ದ ಟೂರಿಸ್ಟ್ ಕಾರಿಗೆ, ಹಿಂದಿನಿಂದ ಬರುತಿದ್ದ ಕೇರಳ ನೋಂದಣಿಯ ಕಾರು ಢಿಕ್ಕಿ ಹೊಡೆದ ಪರಿಣಾಮ ಟೂರಿಸ್ಟ್ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟೂರಿಸ್ಟ್ ಕಾರಿನಲ್ಲಿ ಆರು ಮಂದಿ ಹಾಗೂ ಇನ್ನೊಂದು ಕಾರಿನಲ್ಲಿ ನಾಲ್ವರಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.