Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲಾರಂಭದಿಂದಾಗಿ ಶಿಕ್ಷಕರಲ್ಲಿ ಕೊರೋನ...

ಶಾಲಾರಂಭದಿಂದಾಗಿ ಶಿಕ್ಷಕರಲ್ಲಿ ಕೊರೋನ ಪತ್ತೆ ಎಂಬಂತೆ ಬಿಂಬಿಸುವುದು ಖಂಡನೀಯ

ಮಕ್ಕಳ ನಡೆ-ಶಾಲೆಯ ಕಡೆ ಅಭಿಯಾನ ಸಮಿತಿ

ವಾರ್ತಾಭಾರತಿವಾರ್ತಾಭಾರತಿ6 Jan 2021 9:44 PM IST
share

ಬೆಂಗಳೂರು, ಜ.6: ರಾಜ್ಯದ ಕೆಲವು ಶಿಕ್ಷಕರಲ್ಲಿ ಕೊರೋನ ಸೋಂಕು ಪತ್ತೆಯಾಗಿರುವುದನ್ನು ದೊಡ್ಡ ಸುದ್ದಿಯನ್ನಾಗಿಸಿ, ಶಾಲೆಗಳು ಆರಂಭಗೊಂಡು ಅವರಲ್ಲಿ ಕೊರೋನ ಸೋಂಕು ಉಂಟಾಗಿದೆ ಎಂಬಂತೆ ಬಿಂಬಿಸುವ ಪ್ರಯತ್ನಗಳಾಗುತ್ತಿವೆ. ಇದು ಕುಟಿಲ ಕಾರ್ಯವಾಗಿದ್ದು, ಇದನ್ನು ಬಲವಾಗಿ ಖಂಡಿಸುತ್ತೇವೆ ಎಂದು ಮಕ್ಕಳ ನಡೆ-ಶಾಲೆಯ ಕಡೆ ಅಭಿಯಾನ ಸಮಿತಿ ತಿಳಿಸಿದೆ.

ಶಾಲೆಗಳನ್ನು ತೆರೆಯುವ ಮೊದಲೇ ಶಿಕ್ಷಕರಲ್ಲಿ ಕೊರೋನ ಪತ್ತೆಯ ಪರೀಕ್ಷೆಗಳನ್ನು ಸರಕಾರವು ನಡೆಸಿದ್ದು, ಅವುಗಳ ವರದಿಗಳಷ್ಟೇ ಈಗ ಬರುತ್ತಿವೆ. ಜೊತೆಗೆ, ಕೊರೋನ ಸೋಂಕು ಪತ್ತೆಯಾಗಲು ಸೋಂಕು ತಗಲಿದ ಬಳಿಕ 2-14 ದಿನಗಳಾಗುವುದರಿಂದ, ಶಾಲೆಗಳನ್ನು ತೆರೆಯುವ ಮೊದಲೇ ಈ ಪರೀಕ್ಷೆಗಳನ್ನು ನಡೆಸಲಾಗಿರುವುದರಿಂದ, ಶಾಲೆಗಳನ್ನು ತೆರೆದು ಒಂದೆರಡು ದಿನಗಳಷ್ಟೇ ಆಗಿರುವುದರಿಂದ, ಮತ್ತು ಹೀಗೆ ಸೋಂಕಿತರಾದ ಶಿಕ್ಷಕರು ಈಗ ತೆರೆದಿರುವ ಶಾಲೆಗಳಿಗೆ ಹೋಗಿಯೇ ಇಲ್ಲವಾದ್ದರಿಂದ ಅವರಲ್ಲಿ ಸೊಂಕುಂಟಾಗಿರುವುದಕ್ಕೆ ಶಾಲೆಗಳನ್ನು ತೆರೆದಿರುವುದು ಯಾವ ರೀತಿಯಲ್ಲೂ ಕಾರಣವಾಗಲು ಸಾಧ್ಯವೇ ಇಲ್ಲ. ಆದ್ದರಿಂದ ಈ ಎಲ್ಲಾ ಸೋಂಕುಗಳೂ ಶಾಲೆಗಳು ಆರಂಭಗೊಳ್ಳುವ ಮೊದಲೇ ತಗಲಿರುವುದು ಸ್ಪಷ್ಟವಾಗಿದೆ. ನಾವು ಈ ಹಿಂದೆಯೇ ಹಲವು ಬಾರಿ ಹೇಳಿರುವಂತೆ ಶಿಕ್ಷಕರೂ ಸೇರಿದಂತೆ ವಯಸ್ಕರು ಶಾಲೆಗಳ ಮಕ್ಕಳಿಂದ ಸೋಂಕಿತರಾಗುವ ಸಾಧ್ಯತೆಗಳು ಅತಿ ಕಡಿಮೆ ಇದ್ದು, ಹೊರಗಡೆಯೇ ಸೋಂಕಿತರಾಗುವ ಸಾಧ್ಯತೆಗಳು ಹೆಚ್ಚು. ಶಾಲೆ ಆರಂಭಕ್ಕೆ ಮೊದಲೇ ನಡೆಸಲಾಗಿರುವ ಪರೀಕ್ಷೆಗಳಲ್ಲಿ ಕೆಲವು ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವುದು ನಾವು ಹೇಳುತ್ತಾ ಬಂದಿರುವುದನ್ನು ಸಂಪೂರ್ಣವಾಗಿ ಪುಷ್ಟೀಕರಿಸುತ್ತದೆ ಎಂದು ಸಮಿತಿಯು ತಿಳಿಸಿದೆ.

ಸರಕಾರವು ಕೈಗೊಂಡ ಈ ಮುಂಜಾಗ್ರತಾ ಕ್ರಮದಿಂದಾಗಿ ಸೋಂಕಿತ ಶಿಕ್ಷಕರು ಗುರುತಿಸಲ್ಪಟ್ಟು ಶಾಲೆಗಳ ಕರ್ತವ್ಯಕ್ಕೆ ಹಾಜರಾಗದೇ ಉಳಿದಿರುವುದರಿಂದ ಆ ಶಿಕ್ಷಕರಿಂದ ಇತರ ಶಿಕ್ಷಕರಿಗಾಗಲೀ, ಮಕ್ಕಳಿಗಾಗಲೀ, ಶಾಲೆಗೆ ಬರುವ ಇತರರಿಗಾಗಲೀ ಸೋಂಕು ಹರಡದಂತೆ ತಡೆಯಲು ಸಹಾಯವಾಗಿದೆ. ಆದ್ದರಿಂದ ಹೀಗೆ ಪತ್ತೆಯಾಗಿರುವುದು ಶಾಲೆಗಳನ್ನು ತೆರೆಯುವಾಗ ಸಂಪೂರ್ಣ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವುದಕ್ಕೆ ಸಾಕ್ಷಿಯಾಗಿದೆ, ಮಾತ್ರವಲ್ಲ, ಶಾಲೆಗಳು ಸುರಕ್ಷಿತವಾಗಿವೆ ಎನ್ನುವುದನ್ನು ದೃಢಪಡಿಸುತ್ತದೆ.

ರಾಜ್ಯದ ಎರಡು ಲಕ್ಷಕ್ಕೂ ಹೆಚ್ಚು ಶಿಕ್ಷಕರಲ್ಲಿ ಇಂತಹ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕೇವಲ ಬೆರಳೆಣಿಕೆಯಷ್ಟು ಸಂಖ್ಯೆಯ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ, ಮತ್ತು ಅವರೆಲ್ಲರೂ ಶಾಲೆಗಳಿಂದ ದೂರವೇ ಉಳಿದಿದ್ದಾರೆ. ಒಟ್ಟಿನಲ್ಲಿ, ಸರಕಾರದ ಮುಂಜಾಗ್ರತಾ ಕ್ರಮಗಳ ಕಾರಣದಿಂದ, ಶಾಲೆಗಳು ತೆರೆಯುವ ಮೊದಲೇ ಕೆಲವು ಶಿಕ್ಷಕರಲ್ಲಿ ಕೊರೋನ ಸೋಂಕು ಪತ್ತೆಯಾಗಿದೆಯೇ ಹೊರತು ಶಾಲೆಗಳನ್ನು ತೆರೆದಿರುವುದರಿಂದಲ್ಲ ಮತ್ತು ಈಗ ತೆರೆಯಲಾಗಿರುವ ಶಾಲೆಗಳು ಮಕ್ಕಳಿಗೂ, ಶಿಕ್ಷಕರಿಗೂ ಅತ್ಯಂತ ಸುರಕ್ಷಿತವೇ ಆಗಿವೆ.

ಆದ್ದರಿಂದ ಮಾಧ್ಯಮಗಳು ಇಂಥ ಅವಿವೇಕದ ಅಪಪ್ರಚಾರವನ್ನು ತಕ್ಷಣವೇ ನಿಲ್ಲಿಸಿ, ರಾಜ್ಯದ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಶಾಲೆಗಳನ್ನು ತೆರೆದಿರುವುದನ್ನು ಬೆಂಬಲಿಸಬೇಕು ಎಂದು ಆಗ್ರಹಿಸುತ್ತೇವೆ. ಮಾತ್ರವಲ್ಲ, ಒಂದನೇ ತರಗತಿಯಿಂದ ಎಲ್ಲಾ ತರಗತಿಗಳನ್ನೂ ಕೂಡಲೇ ಪೂರ್ಣವಾಗಿ ತೆರೆಯಬೇಕೆಂದೂ, ಎಲ್ಲಾ ಮಕ್ಕಳಿಗೆ ಶಾಲಾ ಬಿಸಿಯೂಟವನ್ನೂ ಒದಗಿಸಬೇಕೆಂದೂ, ಈ 19-20ರ ಶೈಕ್ಷಣಿಕ ವರ್ಷವನ್ನು ಜೂನ್ ಅಂತ್ಯದವರೆಗೆ ನಡೆಸಿ ಎಲ್ಲಾ ಶಿಕ್ಷಣವನ್ನು ಪೂರ್ಣಗೊಳಿಸಬೇಕೆಂದು ಮಕ್ಕಳ ನಡೆ - ಶಾಲೆಯ ಕಡೆ ಅಭಿಯಾನ ಸಮಿತಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X