varthabharthi


ನಿಧನ

ಎಚ್.ಎಂ.ಭಟ್

ವಾರ್ತಾ ಭಾರತಿ : 6 Apr, 2021

ಉಡುಪಿ, ಎ.6: ಧಾರ್ಮಿಕ ದತ್ತಿ ಇಲಾಖೆಯ ನಿವೃತ್ತ ಅಧಿಕಾರಿ ಹಂಡೇಲು ಮಹಾದೇವ ಭಟ್(ಎಚ್.ಎಂ.ಭಟ್) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಮಂದರ್ತಿ, ಬಪ್ಪನಾಡು, ನೀಲಾವರ, ಪೆರ್ಡೂರು, ಕುಡುಪು, ಪಡುಬಿದ್ರಿ ಮಹಾಗಣಪತಿ ಮಹಾಲಿಂಗೇಶ್ವರ ದೇವಾಲಯಗಳಲ್ಲಿ ಕಾರ್ಯನಿರ್ವಹ ಣಾಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದ ಇವರು, ಧಾರ್ಮಿಕ, ಸಾಮಾಜಿಕ ಕಾರ್ಯ ಕ್ರಮಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)