varthabharthi


ಕರಾವಳಿ

ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ 12 ಜೋಡಿಗಳ ಸಾಮೂಹಿಕ ವಿವಾಹ ಸಮಾರಂಭ

ವಾರ್ತಾ ಭಾರತಿ : 8 Apr, 2021

ವಿಟ್ಲ : ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ 12 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಹಾಜಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕಾರ್ಯಕ್ರಮ ಉದ್ಘಾಟಿಸಿದರು.  ಕೂರ್ನಡ್ಕ ಪೀರ್ ಮೊಹಲ್ಲಾ ಜಮಾಅತ್‍ನ ಖಾಝಿ ಹಾಜಿ ಬಿ.ಕೆ. ಅಬ್ದುಲ್ ಖಾದಿರ್ ಮುಸ್ಲಿಯಾರ್ ಬಂಬ್ರಾಣ ನಿಕಾಹ್‍ನ ನೇತೃತ್ವ ವಹಿಸಿದರು. ಅಲ್ ವಫಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಸಭೆಯ ಅಧ್ಯಕ್ಷತೆ ವಹಿಸಿದರು.

ಶಾಸಕ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಅಲ್ ಮುಝೈನ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ. ಝಕರಿಯಾ ಜೋಕಟ್ಟೆ, ಎಕ್ಸ್ ಪರ್ಟೈಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಎಸ್. ಶೇಖಬ್ಬ ಕರ್ನಿರೆ, ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ವೈಟ್‍ಸ್ಟೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ಎಂ. ಶರೀಫ್, ಹಾಸನ ಜನಪ್ರಿಯ ಆಸ್ಪತ್ರೆಯ ಮಾಲಕ  ಡಾ. ಅಬ್ದುಲ್ ಬಶೀರ್ ವಿ.ಕೆ, ಹೈಸಂ ಸ್ಟೀಲ್ಸ್ ನ ಆಡಳಿತ ನಿರ್ದೇಶಕ ಅಹ್ಮದ್ ಶಾಕಿರ್, ಮುಹಮ್ಮದ್ ಫಾರೂಕ್ ಪೋರ್ಟ್‍ಫೋಲಿಯೊ,  ಮನ್ನಾನ್ ಫೌಂಡೇಶನ್‍ನ ಅಧ್ಯಕ್ಷ ಆರಿಫ್ ಬಿ.ಎಂ, ದ.ಕ ಜಿಲ್ಲಾ ಪಂಚಾಯತ್ ಸದಸ್ಯ ಎಂ ಎಸ್ ಮಹಮ್ಮದ್,  ಹಾಗೂ ಹೈದರ್ ಪರ್ತಿಪ್ಪಾಡಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಸ್ಥೆಯ ಕಾರ್ಯದರ್ಶಿ ಯು.ಎಚ್ ಉಮ್ಮರ್ ಸ್ವಾಗತಿಸಿ, ಪಿ.ಬಿ.ಎ ರಝಾಕ್ ವಂದಿಸಿದರು. ಬಿ.ಎ. ಮಹಮ್ಮದಾಲಿ ಕಾರ್ಯಕ್ರಮ ನಿರೂಪಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)