varthabharthi


ಕರಾವಳಿ

ಬೆಳ್ತಂಗಡಿ : ಯುವತಿಗೆ ಚೂರಿ ಇರಿತ; ಆರೋಪಿ ಸೆರೆ

ವಾರ್ತಾ ಭಾರತಿ : 8 Apr, 2021

ಬೆಳ್ತಂಗಡಿ : ಯುವತಿಗೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಬೆಳ್ತಂಗಡಿಯ ಲಾಯಿಲ ಗ್ರಾಮದ ಪುತ್ರಬೈಲು ಗುರಿಂಗಾನದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪೂಂಜಾಲಕಟ್ಟೆ ನಿವಾಸಿ ಶಮೀರ್ ಎಂದು ತಿಳಿದುಬಂದಿದೆ.

ಕ್ಷುಲ್ಲಕ ಕಾರಣಕ್ಕೆ ಯುವತಿಯ ಮನೆಗೆ ನುಗ್ಗಿದ ಆರೋಪಿ ಶಮೀರ್ ಯುವತಿಗೆ ಹಲ್ಲೆ ಮಾಡಿ, ಚೂರಿಯಿಂದ ಇರಿದಿದ್ದು, ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ  ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)