ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿ ಸಲ್ಲಿಕೆ: ವರದಿ ಆಧರಿಸಿ ಮುಂದಿನ ಕ್ರಮ: ಸಚಿವ ಡಾ.ಸುಧಾಕರ್
ಬೆಂಗಳೂರು, ಎ.15: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿ ಇಂದು (ಎ.15) ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ವರದಿ ಸಲ್ಲಿಸಲಿದೆ. ವರದಿ ಬಗ್ಗೆ ಎ.16ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಚರ್ಚಿಸಿ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿ ಬೇರೆ ಬೇರೆ ರಾಜ್ಯಗಳಲ್ಲಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹಸಚಿವರು ಈ ಬಗ್ಗೆ ನಿಗಾ ವಹಿಸಿದ್ದು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಜನರ ಸಹಕಾರವೂ ಅಗತ್ಯ. ಕೆಲವೊಂದು ಕಾರ್ಯಕ್ರಮಗಳನ್ನು ಮುಂದಕ್ಕೆ ಹಾಕುವುದರಿಂದ ಏನೂ ಆಗದು. ಆದ್ದರಿಂದ ಜನರು ಯಾವುದೇ ಕಾರ್ಯಕ್ರಮಗಳಿರಲಿ ಅದನ್ನು ಒಂದೆರಡು ತಿಂಗಳು ಮುಂದೆ ಹಾಕಿ ಸಹಕರಿಸಬೇಕು ಎಂದು ಮನವಿ ಮಾಡಿದರು.
Next Story