varthabharthi


ರಾಷ್ಟ್ರೀಯ

ಚುನಾವಣೆ ಗೆಲ್ಲಲು ತೋರುವ ಉತ್ಸಾಹ ಕೋವಿಡ್ ವಿರುದ್ಧ ಹೋರಾಟಕ್ಕೆ ಏಕಿಲ್ಲ: ಪ್ರಧಾನಿಗೆ ಸಿಬಲ್ ಪ್ರಶ್ನೆ

ವಾರ್ತಾ ಭಾರತಿ : 20 Apr, 2021

ಹೊಸದಿಲ್ಲಿ: “ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮಬಂಗಾಳದ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ತೋರುವ ಉತ್ಸಾಹವನ್ನು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಏಕೆ ತೋರುತ್ತಿಲ್ಲ’’ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಕೋವಿಡ್-19 ಎರಡನೇ ಅಲೆಯಿಂದಾಗಿ ದೇಶದಾದ್ಯಂತ ಆತಂಕ ಸೃಷ್ಟಿಯಾಗಿದ್ದರೂ ಈ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ಲಕ್ಷಿಸಿರುವ ಪ್ರಧಾನಿಯವರು ಪಶ್ಚಿಮಬಂಗಾಳದಲ್ಲಿ ನಡೆಯುತ್ತಿರುವ ಚುನಾವಣೆಯ ರ್ಯಾಲಿಗಳಲ್ಲಿ ಭಾಷಣ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

“ಮೋದಿಯವರೇ ಚುನಾವಣೆಗಳನ್ನು ಗೆಲ್ಲಲು ನಿಮ್ಮ ಎಲ್ಲ ಶಕ್ತಿ, ಸಾಮರ್ಥ್ಯ, ಶ್ವಾಸಕೋಶದ ಸಾಮರ್ಥ್ಯ, ಸಂಪನ್ಮೂಲಗಳನ್ನು ಬಳಸುತ್ತಿದ್ದೀರಿ. ಆದರೆ ನಮ್ಮ ದೇಶದ ಜನರನ್ನು ಕಾಡುತ್ತಿರುವ ಕೊರೋನ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಅದೇ ಉತ್ಸಾಹವನ್ನು ಏಕೆ ತೋರುತ್ತಿಲ್ಲ? ಎಂದು ಸಿಬಲ್ ಟ್ವಿಟರ್ ನಲ್ಲಿ ಕೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)