ಕೊರೋನಕ್ಕಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್: ಸಂಸದ ತೇಜಸ್ವಿಸೂರ್ಯ ವಿರುದ್ಧ ಸಿದ್ದರಾಮಯ್ಯ ಕಿಡಿ
"ಬೆಡ್ ಬ್ಲಾಕಿಂಗ್ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ?"
ಬೆಂಗಳೂರು, ಮೇ 5: ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ- ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೋನ ರೋಗಕ್ಕೂ ಯಾಕೆ ಎಳೆದು ತರುತ್ತೀರಿ? ಕೊರೋನ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್. ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಿ ಸಂಸದ ತೇಜಸ್ವಿ ಸೂರ್ಯ ಅವರು ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಸಿದ್ದರಾಮಯ್ಯ ಗುರುವಾರ ಬೆಳಗ್ಗೆ ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ತೇಜಸ್ವಿ ಸೂರ್ಯ, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ, ಸಚಿವರು ಮತ್ತು ಬಿಜೆಪಿ ಸರಕಾರ ಶಾಸಕರು, ಸಂಸದರ ವಿರುದ್ಧ. ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ? ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಸುದ್ದಿಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ಸಿಎಂ ಮೇಲೆ ಒತ್ತಡ ಹೇರಿ ಎಂದು ತೇಜಸ್ವಿ ಸೂರ್ಯರಿಗೆ ಸಲಹೆ ನೀಡಿದ್ದಾರೆ.
ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು ತೇಜಸ್ವಿ ಸೂರ್ಯ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ- ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೋನ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೋನ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್. ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಬೇಕು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿ ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿ ಎಂದು ಆಗ್ರಹಪಡಿಸಿದ್ದಾರೆ.
'ಯಥಾ ರಾಜಾ ತಥಾ ಮಂತ್ರಿ'. 'ಮೈ ಬೀ ಕಾವೂಂಗಾ, ತುಮ್ ಬಿ ಕಾವೋ' ಎನ್ನುವುದೇ ನಿಮ್ಮ ಮೋದಿ ಅವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮುಖ್ಯಮಂತ್ರಿಯಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ- ಸಿಬ್ಬಂದಿಯನ್ನು ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೋನವನ್ನು ಯಾಕೆ ಬಳಸಿಕೊಳ್ತೀರಿ ಎಂದು ತೇಜಸ್ವಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ ಅದನ್ನೂ ರಾಜ್ಯದ ಜನತೆಗೆ ತಿಳಿಸಿ ಎಂದು ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ, ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ಮೋದಿ ಅವರ ಅಚ್ಚೇ ದಿನ್ ತೇಜಸ್ವಿ ಸೂರ್ಯ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ರಾಜ್ಯಕ್ಕೆ ವೆಂಟಿಲೇಟರ್, ಐಸಿಯು, ಆಕ್ಸಿಜನ್ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿ ರಕ್ಷಿಸುತ್ತಿರುವುದು ಯಾರನ್ನು ತಮ್ಮನ್ನೋ? ಅಧಿಕಾರಿಗಳನ್ನೋ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.
ರಾಜ್ಯದ ಕೊರೋನ ರೋಗಿಗಳಿಗೆ ಬೆಡ್ ಕೊಡಿ, ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
.@Tejasvi_Surya, ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ,
— Siddaramaiah (@siddaramaiah) May 5, 2021
ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು BBMPಯ ಅಧಿಕಾರಿಗಳ ವಿರುದ್ಧವಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ, ಸಚಿವರು ಮತ್ತು @BJP4Karnataka ಶಾಸಕರು,ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?1/11
ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು @CMofKarnataka ಮೇಲೆ ಒತ್ತಡ ಹೇರಿ @Tejasvi_Surya. 2/11#Corona
— Siddaramaiah (@siddaramaiah) May 5, 2021
ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು @Tejasvi_Surya? 3/11#Corona
— Siddaramaiah (@siddaramaiah) May 5, 2021
ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ. 4/11#Corona
— Siddaramaiah (@siddaramaiah) May 5, 2021
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ @Tejasvi_Surya ಅವರೇ,
— Siddaramaiah (@siddaramaiah) May 5, 2021
ಮುಖ್ಯ ಆರೋಪಿಗಳಾದ @CMofKarnataka ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. 5/11#Corona
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ @Tejasvi_Surya ಅವರೇ,
— Siddaramaiah (@siddaramaiah) May 5, 2021
ಮುಖ್ಯ ಆರೋಪಿಗಳಾದ @CMofKarnataka ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. 5/11#Corona
'ಯಥಾ ರಾಜಾ ತಥಾ ಮಂತ್ರಿ'. 'ಮೈ ಬೀ ಕಾವೂಂಗಾ, ತುಮ್ ಬಿ ಕಾವೋ' ಎನ್ನುವುದೇ ನಿಮ್ಮ @narendramodi ಅವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ @Tejasvi_Surya ? 6/11#Corona
— Siddaramaiah (@siddaramaiah) May 5, 2021
ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ @Tejasvi_Surya? 7/11#Corona
— Siddaramaiah (@siddaramaiah) May 5, 2021
ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ @BJP4Karnataka ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ ಅದನ್ನೂ ರಾಜ್ಯದ ಜನತೆಗೆ ತಿಳಿಸಿ @Tejasvi_Surya . 8/11#Corona
— Siddaramaiah (@siddaramaiah) May 5, 2021
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ, ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ @narendramodi ಅವರ ಅಚ್ಚೇ ದಿನ್ @Tejasvi_Surya?9/11#Corona
— Siddaramaiah (@siddaramaiah) May 5, 2021