varthabharthi


ಕರ್ನಾಟಕ

ಅಜ್ಜೀಪುರ: ಬಾವಿಯಲ್ಲಿ ಪತ್ತೆಯಾದ ವೃದ್ಧೆಯ ಮೃತದೇಹದ ಪರೀಕ್ಷೆ ನಡೆಸಿದಾಗ ಕೋವಿಡ್ ಸೋಂಕು ದೃಢ

ವಾರ್ತಾ ಭಾರತಿ : 5 May, 2021

ಹನೂರು, ಮೇ 5: ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಮ್ಮನಗದ್ದೆ ಸಮೀಪದ ವಡ್ಡರ ದೊಡ್ಡಿಯ ಗ್ರಾಮದ ಬಳಿ ಇರುವ ಕೆರೆಯಲ್ಲಿ 90 ವರ್ಷದ ವೃದ್ಧೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಗಂಟಲ ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಪಾಸಿಟಿವ್ ಇರುವುದು ದೃಡಪಟ್ಟಿದೆ.

ಈ ಹಿನ್ನೆಲೆಯಲ್ಲಿ ನಾಲ್ವರು ಸ್ವಯಂಸೇವಕರು ಪಿಪಿಇ ಕಿಟ್ ಧರಿಸಿಕೊಂಡು ಪೊಲೀಸರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಯ ಸಹಕಾರದೊಂದಿಗೆ ಕೋವಿಡ್ ಸೋಂಕಿತ ವೃದ್ಧೆಯ ಮೃತದೇಹವನ್ನು ಮಂಚದ ಸಮೇತವಾಗಿ ಹೊತ್ತೊಯ್ದು  ಗ್ರಾಮದ ಹೊರವಲಯದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿದರು.

ಮೃತರಿಗೆ ಮೂವರು ಪುತ್ರರು, ಇಬ್ಬರು ಪುತ್ರಿಯರಿದ್ದು, ಈ ಪೈಕಿ ಮೂವರು ಪುತ್ರರು ಹಾಗೂ ಓರ್ವೆ ಪುತ್ರಿ ಮೃತಪಟ್ಟಿದ್ದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣಕ್ಕೆ ವೃದ್ಧೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

 ಈ ನಡುವೆ ಕೋವಿಡ್ ಸೋಂಕಿತ ವೃದ್ದೆಯ ಅಂತ್ಯ ಸಂಸ್ಕಾರಕ್ಕೆ ಅಜ್ಜೀಪುರ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಸಹಕಾರ ನೀಡಿದೆ ನುಣಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.   

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)