ಬೆಂಗಳೂರು: 14 ಮಂದಿಗೆ ಬ್ಲ್ಯಾಕ್ ಫಂಗಸ್; ಇಬ್ಬರು ಮೃತ್ಯು
ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 16: ಕೊರೋನ ಸೋಂಕಿನ ಎರಡನೇ ಅಲೆಯ ಭೀತಿಯ ನಡುವೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಇಂದು ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 14 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಅದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
'ಉಳಿದ 12 ಮಂದಿಯ ಪೈಕಿ 5 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಕಿ 7 ಮಂದಿ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಇಲಾಖೆ ತಿಳಿಸಿದೆ.
Next Story