ಎಂ.ಎ. ಹಮೀದ್
ಮಂಗಳೂರು, ಮೇ 22: ಪಾವೂರು ಗ್ರಾಮದ ಮಲಾರ್ ಬದ್ರಿಯಾ ನಗರದ ನಡುಗುಡ್ಡ ನಿವಾಸಿ ಎಂ.ಎ. ಹಮೀದ್ (63) ಶುಕ್ರವಾರ ತಡರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಆರು ಮಂದಿ ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಜನತಾ ದಳದ ಹಿರಿಯ ಮುಖಂಡರಾಗಿದ್ದ ಎಂ.ಎ.ಹಮೀದ್ ಪಾವೂರು ಗ್ರಾಪಂನ ಅಧ್ಯಕ್ಷರಾಗಿ ಮತ್ತು ಮಲಾರ್ ಬದ್ರಿಯಾ ನಗರದ ಬದ್ರಿಯಾ ಜುಮಾ ಮಸ್ಜಿದ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಂತಾಪ: ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ಪಾವೂರು ಗ್ರಾಪಂ ಮಾಜಿ ಅಧ್ಯಕ್ಷ ಫಿರೋಝ್ ಮಲಾರ್, ಪಾವೂರು ಗ್ರಾಪಂ ಉಪಾಧ್ಯಕ್ಷ ಅನ್ಸಾರ್ ಇನೋಳಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಹಾಗೂ ಹಾಲಿ ಸದಸ್ಯ ವಲೇರಿಯನ್ ಡಿಸೋಜ ಸಂತಾಪ ಸೂಚಿಸಿದ್ದಾರೆ.
Next Story