ಬ್ರಾಹ್ಮಣರ ಅವಹೇಳನ ಆರೋಪ: ನಟ ಚೇತನ್ ವಿರುದ್ಧ ಎಫ್ಐಆರ್
ಬೆಂಗಳೂರು, ಜೂ.10: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಸಂಬಂಧ ಸಿನಿಮಾ ನಟ, ಹೋರಾಟಗಾರ ಚೇತನ್ ವಿರುದ್ಧ ಇಲ್ಲಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಭಾರತೀಯ ದಂಡ ಸಂಹಿತೆ ಸೆಕ್ಷನ್153(ಬಿ), ಸೆಕ್ಷನ್ 295(ಎ) (ಧಾರ್ಮಿಕ ಭಾವನೆ ಕೆರಳಿಸುವುದು) ಅಡಿ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಟ ಚೇತನ್ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ವಿಪ್ರ ಯುವ ವೇದಿಕೆ ನೀಡಿದ ದೂರಿನ್ವಯ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
Next Story