varthabharthi


ರಾಷ್ಟ್ರೀಯ

ಕೋವಿಡ್ ಸಾವಿನ ಸಂಖ್ಯೆ ಮರೆಮಾಚಿದ ಬಿಜೆಪಿ:ಕಾಂಗ್ರೆಸ್ ಆರೋಪ

ವಾರ್ತಾ ಭಾರತಿ : 12 Jun, 2021

ಪವನ್ ಖೇರ, photo: twitter 

ಹೊಸದಿಲ್ಲಿ:ಮಧ್ಯಪ್ರದೇಶ, ಉತ್ತರಪ್ರದೇಶ ಹಾಗೂ ಗುಜರಾತ್ ರಾಜ್ಯಗಳಲ್ಲಿ ಕೋವಿಡ್ ನಿಂದ ಸಾವಿಗೀಡಾದವರ ಸಂಖ್ಯೆಯನ್ನು ಬಿಜೆಪಿ ಮರೆ ಮಾಚಿದೆ ಎಂದು ಶನಿವಾರ ಆರೋಪಿಸಿರುವ ಕಾಂಗ್ರೆಸ್, ಈ ರಾಜ್ಯಗಳ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಹಾಗೂ ಈ ಕುರಿತು ನ್ಯಾಯಾಂಗ ತನಿಖೆ ನಡೆಯಬೇಕೆಂದು ಒತ್ತಾಯಿಸಿದೆ.

ಈ ರಾಜ್ಯಗಳ ಮುಖ್ಯಮಂತ್ರಿಗಳಿಗೆ ತಮ್ಮ ಸ್ಥಾನಗಳಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರ ಅವರು ಆನ್ ಲೈನ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಮೇ ತಿಂಗಳಲ್ಲಿ  1.7 ಲಕ್ಷ ಸಾವು ಸಂಭವಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಸರಕಾರದ ಅಂಕಿ-ಅಂಶ ಗಳಲ್ಲಿ ಕಡಿಮೆ ಸಾವಿನ ಸಂಖ್ಯೆ ವರದಿಯಾಗಿದೆ. ಎಂದಿಗೂ ನೋಡದ, ಕೇಳದ ಸತ್ಯ ನಮ್ಮ ಮುಂದಿದೆ. ಮೇ ತಿಂಗಳಲ್ಲಿ ವರದಿಯಾದ ಸಾವಿನ ಸಂಖ್ಯೆಯು 6 ತಿಂಗಳಲ್ಲಿ ವರದಿಯಾದ ಸಾವಿಗೆ ಸಮಾನವಾಗಿದೆ. ಇದಕ್ಕೆಯಾರು ಜವಾಬ್ದಾರರು ಎಂದು ಪ್ರಧಾನಿ ಮೋದಿ ಹಾಗೂ ಮಧ್ಯಪ್ರದೇಶದ ಮುಖ್ಯಮಂತ್ರಿ ಅವರು ಹೇಳಬೇಕು ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಒತ್ತಾಯಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)