ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ತಾಯಿಯ ಮೇಲೆ ಅತ್ಯಾಚಾರ; ಪುತ್ರಿಯ ಆರೋಪ
ಅಮೇಠಿ, ಜೂ. 13: ಲಕ್ನೋದ ಆಸ್ಪತ್ರೆಯಲ್ಲಿ ತನ್ನ ತಾಯಿಯ ಮೇಲೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಅತ್ಯಾಚಾರ ಎಸಗಿದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾದ ಒಂದು ದಿನದ ಬಳಿಕ ಅವರು ಮೃತಪಟ್ಟಿದ್ದಾರೆ ಎಂದು ಮಹಿಳೆಯೋರ್ವರು ಆರೋಪಿಸಿದ್ದಾರೆ. ಅವರನ್ನು ಜೂನ್ 12ರಂದು ಇನ್ನೊಂದು ಆಸ್ಪತ್ರೆಗೆ ವರ್ಗಾಯಿಸುವ ಸಂದರ್ಭ ಮೃತಪಟ್ಟಿದ್ದಾರೆ ಎಂದು ಮೃತಪಟ್ಟ ಮಹಿಳೆಯ ಕುಟುಂಬದ ಸದಸ್ಯರು ಹೇಳಿದ್ದಾರೆ.
ಪೊಲೀಸರು ಈ ಬಗ್ಗೆ ಗಮನ ಹರಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಸ್ಮತಿ ಇರಾನಿ ಅವರು ಅಮೇಠಿಗೆ ಶನಿವಾರ ಭೇಟಿ ನೀಡಿದ್ದ ಸಂದರ್ಭ ಈ ವಿಷಯ ತಿಳಿಸಿದ್ದೆ ಎಂದು ಮಹಿಳೆ ತಿಳಿಸಿದ್ದಾರೆ. ಸ್ಮತಿ ಇರಾನಿ ಅವರ ಸೂಚನೆಯಂತೆ ಮಹಿಳೆಯ ಆರೋಪದ ಬಗ್ಗೆ ತನಿಖೆ ನಡೆಸಲು ಅಮೇಠಿ ಜಿಲ್ಲಾ ದಂಡಾಧಿಕಾರಿ ಅರುಣ್ ಕುಮಾರ್ ಅವರು ತಂಡವೊಂದನ್ನು ರೂಪಿಸಿದ್ದಾರೆ.
Next Story