varthabharthi


ಕರ್ನಾಟಕ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನಿಧನ

ವಾರ್ತಾ ಭಾರತಿ : 14 Jun, 2021

ಬೆಂಗಳೂರು, ಜೂ.14: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ, ವಿತರಕ ಕೆ.ಸಿ.ಎನ್ ಚಂದ್ರಶೇಖರ್ (69) ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಚಂದ್ರಶೇಖರ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರವಿವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. 

ಇಂದು ಬೆಳಗ್ಗೆ 9 ಗಂಟೆಯಿಂದ ಶಿವಾನಂದ ಸರ್ಕಲ್ ಬಳಿ ಇರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

50ಕ್ಕೂ ಹೆಚ್ಚು ಚಿತ್ರ ನಿರ್ಮಾಣ, ಸುಮಾರು 500 ಚಿತ್ರಗಳ ವಿತರಣೆ ಮಾಡಿದ್ದ ಚಂದ್ರಶೇಖರ್ ಅವರು ಸೆನ್ಸಾರ್ ಮಂಡಳಿ ಸದಸ್ಯರಾಗಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ (ಕೆಎಫ್‌ಸಿಸಿ) ಹಾಗೂ ಒಂದು ಬಾರಿ ಸೌತ್ ಇಂಡಿಯನ್ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ (ಎಸ್‌ಐಎಫ್‌ಸಿಸಿ) ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)