ಪ.ಜಾತಿ, ಪಂಗಡದವರಿಗೆ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಉಡುಪಿ, ಜು.6: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಾರ್ಷಿಕ 2.50 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದವರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಪ್ರಸಕ್ತ ಸಾಲಿನಲ್ಲಿ ಶೇ.24.10ರ ನಿಧಿಯಡಿ ಸಣ್ಣ ಉದ್ದಿಮೆ ಹಾಗೂ ಮನೆ ದುರಸ್ಥಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
Next Story