ಯುವ ಕಾಂಗ್ರೆಸ್ನಿಂದ ಕೋವಿಡ್ ವಾರಿಯರ್ಸ್ಗೆ ಸನ್ಮಾನ
ಮಂಗಳೂರು, ಜು.13: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಭೇಟಿ ಹಿನ್ನೆಲೆ ದ.ಕ.ಜಿಲ್ಲಾ ಯುವ ಕಾಂಗ್ರೆಸ್ನಿಂದ ಕೋವಿಡ್ ವಾರಿಯರ್ಸ್ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಹಿರಿಯರಿಗೆ ಗೌರವ ಕೊಟ್ಟು ಅವರ ಮಾರ್ಗದರ್ಶನದಂತೆ ಕ್ರಿಯಾಶೀಲತೆಯಿಂದ ಮುನ್ನುಗ್ಗಿ, ಯಶಸ್ಸು ನಿಮ್ಮನ್ನು ಕೈ ಬಿಡದು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಅವರು ಕೋವಿಡ್ ಸಂದರ್ಭದಲ್ಲಿ ದುಡಿದ ಯುವ ಕಾಂಗ್ರೆಸ್ನ ಕೊರೋನ ವಾರಿಯರ್ಸ್ ಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಕುಮಾರ್ ಯಾದವ್, ಸುರಾಭಿ ದಿವೇದಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ವಿದ್ಯಾ ಬಾಲಕೃಷ್ಣನ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಶಾಹುಲ್ ಹಮೀದ್, ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದೀಪಿಕ ರೆಡ್ಡಿ, ಮೆರಿಲ್ ರೇಗೊ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಮನ್ನಾರ್ ಮನ್ನಾನ್, ಆಶಿತ್ ಪಿರೇರಾ, ಸರ್ಫಾಝ್ ನವಾಝ್, ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು, ನಾಯಕರು ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ರಝಾಕ್ ನಿರೂಪಿಸಿದರು.