ಉಡುಪಿ: ಶನಿವಾರ ಕೋವಿಡ್ ಎರಡನೇ ಡೋಸ್ ಲಸಿಕೆ ಲಭ್ಯ
ಉಡುಪಿ, ಜು.16: ಜಿಲ್ಲೆಯಲ್ಲಿ ಜು.17ರಂದು ಉಡುಪಿ ನಗರ ಪ್ರದೇಶದ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನು ಭವಿಗಳು, ಆದ್ಯತಾ ಗುಂಪಿನವರು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರುಗಳಿಗೆ ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಕೋವಿಡ್-19 2ನೇ ಡೋಸ್ ಲಸಿಕೆ ಲಭ್ಯವಿರುತ್ತದೆ.
ಮಣಿಪಾಲದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲಾ ಕೇಂದ್ರದಲ್ಲಿ 2ನೇ ಡೋಸ್ ಕೋವಿಶೀಲ್ಡ್ -100 ಡೋಸ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಲಂಕಾರ್ ಥಿಯೇಟರ್ ಬಳಿಯ ಹಳೆ ಕಟ್ಟಡದಲ್ಲಿ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್, ಕುಕ್ಕಿಕಟ್ಟೆಯ ಎಫ್ಪಿಎಐನ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ಡೋಸ್ ಕೋವಿಶೀಲ್ಡ್ 150 ಡೋಸ್ ಹಾಗೂ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜುಲೈ 25ರೊಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಸಿಕೆಯನ್ನು ಬೆಳಗ್ಗೆ 10:30ರಿಂದ ಅಪರಾಹ್ನ 3:30ರವರೆಗೆ ನೀಡಲಾಗುವುದು.
ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು, ಆರೋಗ್ಯ ಕಾರ್ಯಕರ್ತರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರು ಹಾಗೂ 45 ವರ್ಷ ಮೇಲ್ಪಟ್ಟ ಸಾರ್ವಜನಿಕರು ಕೋವಿಡ್-19 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.