varthabharthi


ರಾಷ್ಟ್ರೀಯ

ಯಡಿಯೂರಪ್ಪ ಇಲ್ಲದೆ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಸುಬ್ರಮಣಿಯನ್ ಸ್ವಾಮಿ

ವಾರ್ತಾ ಭಾರತಿ : 21 Jul, 2021

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಇಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಬುಧವಾರ ಹೇಳಿದ್ದಾರೆ.

ಟ್ವಿಟರ್ ನಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಸ್ವಾಮಿ, ಕರ್ನಾಟಕದಲ್ಲಿ ಬಿಜೆಪಿಯನ್ನು ಮೊದಲ ಬಾರಿ ಅಧಿಕಾರಕ್ಕೆ ತಂದವರು ಯಡಿಯೂರಪ್ಪ.  ಅವರು ಚಮಚಾ ಆಗಲಾರರು. ಹೀಗಾಗಿ ಕೆಲವರು ಅವರನ್ನು ಅಧಿಕಾರದಿಂದ ತೆಗೆದುಹಾಕಲು ನೋಡುತ್ತಿದ್ದಾರೆ. ಯಡಿಯೂರಪ್ಪ ಇಲ್ಲದೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅವರು ಪಕ್ಷಕ್ಕೆ ವಾಪಸ್ ಆದ ಬಳಿಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಮರಳಿತ್ತು. ಏಕೆ ಅದೇ ತಪ್ಪನ್ನು ಪುನರಾವರ್ತಿಸುತ್ತೀರಿ? ಎಂದು ಅವರು ಪ್ರಶ್ನಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)