ಬ್ಯಾಡ್ಮಿಂಟನ್ : ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್ ಗೆ ಲಗ್ಗೆ
ಟೋಕಿಯೊ: ಭಾರತದ ಬ್ಯಾಡ್ಮಿಂಟನ್ ಸ್ಟಾರ್ ಪಿ.ವಿ. ಸಿಂಧು ಟೋಕಿಯೊ ಒಲಿಂಪಿಕ್ಸ್ ನ ಮಹಿಳೆಯರ ಸಿಂಗಲ್ಸ್ ನ ಕ್ವಾರ್ಟರ್ ಫೈನಲ್ ನಲ್ಲಿ ಸ್ಥಾನ ಪಡೆದಿದ್ದಾರೆ.
ಗುರುವಾರ ನಡೆದ ಪ್ರಿ-ಕ್ವಾರ್ಟರ್ ಫೈನಲ್ ನಲ್ಲಿ ಸಿಂಧು ಅವರು ಡೆನ್ಮಾರ್ಕ್ ನ ಮಿಯಾ ಬ್ಲಿಚ್ ಫೆಲ್ಟ್ ಅವರನ್ನು 21-15, 21-13 ಅಂತರದಿಂದ ಮಣಿಸಿದರು.
ರಿಯೊ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸಿಂಧು ಅವರು ಗೇಮ್ಸ್ ನಲ್ಲಿ ಎರಡನೇ ಬಾರಿ ಪದಕ ಗೆಲ್ಲಲು ಇನ್ನೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಅಗತ್ಯವಿದೆ.
ಸಿಂಧು ಅವರು ಕ್ವಾರ್ಟರ್ ಫೈನಲ್ ನಲ್ಲಿ ಜಪಾನ್ ನ ಅಕಾನೆ ಯಮಗುಚಿ ಅವರನ್ನು ಎದುರಿಸಲಿದ್ದಾರೆ.
Next Story