ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಉಡುಪಿ, ಜು.30: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಪಂಗಡದ ಹಾಗೂ ಅರಣ್ಯಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ಜನಾಂಗದವರು ಸ್ವಯಂ ಉದ್ಯೋಗ ಹೊಂದಲು ನೇರಸಾಲ, ಉದ್ಯಮಶೀಲತಾ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು, 18ರಿಂದ 60 ವರ್ಷದೊಳಗಿನ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ.25 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -https://kmvstdcl.karnataka.gov.in- ನಿಗಮದ ವೆಬ್ಸೈಟ್ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story