ಕೆ.ಪಿ.ನಂಜುಡಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮನವಿ
ಕುಂದಾಪುರ, ಆ.2: ವಿಶ್ವಕರ್ಮ ಸಮುದಾಯ ಮುಖಂಡ, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರಿಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಉಡುಪಿ ಜಿಲ್ಲಾ ನಿಯೋಗ ಇಂದು ಕುಂದಾಪುರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.
ವಿಶ್ವಕರ್ಮ ಸಮುದಾಯದ ಜೊತೆಗೆ ಹಿಂದುಳಿದ ವರ್ಗಗಳ ನಾಯಕ ರಾಗಿಯೂ ಹೊರಹೊಮ್ಮುತ್ತಿರುವ ಕೆ.ಪಿ.ನಂಜುಂಡಿಯವರಿಗೆ ಅವರ ಅರ್ಹತೆ, ಪಕ್ಷ ಮತ್ತು ಸಮಾಜಕ್ಕೆ ನೀಡಿದ ಸೇವೆಯನ್ನು ಪರಿಗಣಿಸಿ ವಿಶೇಷ ಆಧ್ಯತೆಯ ನೆಲೆಯಲ್ಲಿ ಸಚಿವ ಸ್ಥಾನವನ್ನು ನೀಡಬೇಕು ಎಂದು ಮಹಾಸಭಾ ಮನವಿಯಲ್ಲಿ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ರಮೇಶ ಆಚಾರ್ಯ ನೇರಂಬಳ್ಳಿ, ಗೌರವಾಧ್ಯಕ್ಷ ಗಂಗಾಧರ ಆಚಾರ್ಯ, ಯುವ ಘಟಕದ ಅಧ್ಯಕ್ಷ ರಾಮಕೃಷ್ಣ ಆಚಾರ್, ಪ್ರಮುಖರಾದ ಪ್ರಬಾಕರ್, ರುಕ್ಮಿಣಿ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
Next Story