varthabharthi


ಕರ್ನಾಟಕ

ಸರಕಾರಿ, ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಮುಂದೂಡಿ ಸುತ್ತೋಲೆ ಹೊರಡಿಸಿದ ಸರಕಾರ

ವಾರ್ತಾ ಭಾರತಿ : 3 Aug, 2021

ಬೆಂಗಳೂರು, ಆ.3: ರಾಜ್ಯದ ಎಲ್ಲ ಸರಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆ.4ರಿಂದ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸೂಚಿಸಲಾಗಿತ್ತು. 

ಆದರೆ, ಕಾರಣಾಂತರಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 2021-22ನೆ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚಿಸಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಕಾಲೇಜು ಶಿಕ್ಷಣ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.        

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)