ಮಲ್ಪೆಯಲ್ಲಿ ಪಿಎಫ್ಐಯಿಂದ ರಕ್ತದಾನ ಶಿಬಿರ
ಉಡುಪಿ, ಆ.7: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಮಲ್ಪೆ ಇದರ ವತಿಯಿಂದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವನ್ನು ಮಲ್ಪೆಯ ಸೈಯದ್ ಅಬೂಬಕ್ಕರ್ ಸಿದ್ದೀಕ್ ಜಾಮಿಯಾ ಮಸೀದಿ ಆವರಣದಲ್ಲಿ ಶನಿವಾರ ಆಯೋಜಿಸಲಾಗಿತ್ತು.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪ್ರೊಫೆಸರ್ ಹಾಗೂ ಬ್ಲಡ್ ಸೆಂಟರ್ನ ಮುಖ್ಯಸ್ಥೆ ಡಾ.ಶಮೀ ಶಾಸ್ತ್ರಿ ರಕ್ತದಾನದ ಮಹತ್ವದ ಬಗ್ಗೆ ವಿವರಿಸಿದರು. ಮುಖ್ಯ ಅತಿಥಿಗಳಾಗಿ ಪಿಎಫ್ಐ ಉಡುಪಿ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್, ಆಕ್ಸೆಸ್ ಇಂಡಿಯಾ ಟ್ರೈನರ್ ಮತ್ತು ಸರ್ಟಿಫೈಡ್ ಹೆಲ್ತ್ ಕೋಚ್ ರಿಜ್ವಾನ್ ಅಬ್ದುಲ್ ರೆಹಮಾನ್, ಮಲ್ಪೆ ಜಾಮಿಯಾ ಮಸೀದಿ ಅಧ್ಯಕ್ಷ ಖತೀಬ್ ಅಬ್ದುಲ್ ರಶೀದ್ ಮಾತನಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಾಧನೆಗೈದ ಇಬ್ಬರು ಸಾಧಕರಿಗೆ ಸನ್ಮಾನಿಸಲಾಯಿತು. ಮಲ್ಪೆ ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ ಫಾರಂನ ಗೌರವಾಧ್ಯಕ್ಷ ಮುಹಮ್ಮದ್ ಯಾಸೀನ್, ಅಧ್ಯಕ್ಷ ಎಚ್.ಮುಹಮ್ಮದ್ ಸಿರಾಜ್, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಶರೀಫ್, ಪಿಎಫ್ಐ ಕೋಸ್ಟಲ್ ವಿಭಾಗೀಯ ಅಧ್ಯಕ್ಷ ಅಬ್ದುಲ್ ಶುಕೂರ್ ಭಾಗವಹಿಸಿದ್ದರು. ತಾಬಿಷ್ ಆದಿ ಉಡುಪಿ ಕಾರ್ಯಕ್ರಮ ನಿರೂಪಿಸಿದರು. ಸುಮಾರು 69 ಯೂನಿಟ್ ರಕ್ತ ಸಂಗ್ರಹಿಸಲಾಯಿತು.