ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿ ಆಹ್ವಾನ
ಉಡುಪಿ, ಆ.10: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿ ರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಆಪ್ಲೈನ್ ಅರ್ಜಿಯನ್ನು ಸಂಬಂಧಪಟ್ಟ ಕಾಲೇಜುಗಳಿಂದ ಅಥವಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಉಡುಪಿ, ಕುಂದಾಪುರ, ಕಾರ್ಕಳ ಇವರಿಂದ ಪಡೆದು, ಅರ್ಜಿ ಭರ್ತಿ ಮಾಡಿ ಎಲ್ಲಾ ದಾಖಲಾತಿ ಗಳೊಂದಿಗೆ ಆ.31ರೊಳಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ: 0820-2573596ನ್ನು ಸಂಪರ್ಕಿ ಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story