ಕೊರಗ ಸಮುದಾಯದಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಆ.12: ಪ್ರಸಕ್ತ 2021-22ನೇ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮೂಲ ನಿವಾಸಿ ಕೊರಗ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಿದೆ.
ಎಸೆಸೆಲ್ಸಿಗೆ 10,000 ರೂ. ಪಿಯುಸಿ ಮತ್ತು ತತ್ಸಮಾನ ಕೋರ್ಸುಗಳ ಪ್ರತೀ ವರ್ಷಕ್ಕೆ 12,000 ರೂ., ಎಲ್ಲ ಪದವಿ ಕೋರ್ಸುಗಳ ಪ್ರತೀ ವರ್ಷಕ್ಕೆ 15,000 ಹಾಗೂ ಸ್ನಾತಕೋತ್ತರ ಕೋರ್ಸುಗಳ ಪ್ರತೀ ವರ್ಷಕ್ಕೆ 18,000 ರೂ. ಪ್ರೋತ್ಸಾಹಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಅರ್ಜಿ ನಮೂನೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲೂಕಿನ ಸಹಾಯಕ ನಿರ್ದೇಶಕ (ಗ್ರೇಡ್ 12)ರನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story