ಮಂಗಳೂರಿನಲ್ಲಿ ಎನ್ ಐಎ ಕಚೇರಿ ಆರಂಭಿಸುವ ಸಾಧ್ಯತೆ ಇದೆ: ಸಿಎಂ ಬೊಮ್ಮಾಯಿ
ಮಂಗಳೂರು, ಆ.13: ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಉಡುಪಿಯಿಂದ ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಅವರು ಈಗಾಗಲೇ ಎರಡು ಸಭೆಗಳನ್ನು ನಡೆಸಿದ್ದಾರೆ. ಇನ್ನೂ ಕೆಲವು ಸಭೆ ನಡೆಯಲಿದೆ. ಮುಂಬರುವ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ಕೊಟ್ಟು ಪರಿಶೀಲಿಸುತ್ತಾರೆ. ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಬಗ್ಗೆ ಕೆಲವು ವಿಚಾರಗಳನ್ನು ನಾವು ಬಹಿರಂಗಪಡಿಸಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.
Next Story