ಗಾಂಜಾ ಸೇವನೆ: ಆರೋಪಿ ಸೆರೆ
ಮಂಗಳೂರು, ಆ.21: ನಗರದ ಫುಟ್ಬಾಲ್ ಮೈದಾನದ ಪಶ್ಚಿಮ ಬದಿಯ ಗ್ಯಾಲರಿ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಭವಂತಿ ಸ್ಟ್ರೀಟ್ನ ಶರತ್ ಗಟ್ಟಿ (24) ಎಂಬಾತನನ್ನು ಪಾಂಡೇಶ್ವರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎಸ್ಸೈ ಶೀತಲ್ ಆಲಗೂರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಿಚಾರಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Next Story