ದ.ಕ. ಜಿಲ್ಲೆಯಲ್ಲಿ 9, 10ನೇ ತರಗತಿ ಆರಂಭ ಪ್ರಕ್ರಿಯೆ ಮುಂದೂಡಿಕೆ
ಮಂಗಳೂರು, ಆ.26: ಕೋವಿಡ್-19 ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ 9 ಹಾಗೂ 10ನೇ ತರಗತಿಗಳ ಭೌತಿಕ ತರಗತಿಗಳ ಶಾಲಾ ಪ್ರಾರಂಭ ಪ್ರಕ್ರಿಯೆಯನ್ನು ಮುಂದೂಡಲಾಗಿದೆ.
ದ.ಕ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪಾಸಿಟಿವಿ ದರ ಶೇ.2ಕ್ಕಿಂತ ಹೆಚ್ಚಿರುವುದರಿಂದ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವುದನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಾಲಾ ಪ್ರಾರಂಭದ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story