ಆ.30: ಸಚಿವ ಡಾ. ಅಶ್ವತ್ಥ ನಾರಾಯಣ ದ.ಕ. ಜಿಲ್ಲಾ ಪ್ರವಾಸ
ಮಂಗಳೂರು, ಆ.29: ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ವಿದ್ಯುನ್ಮಾನ, ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಸಹ ಕುಲಾಧಿಪತಿಯೂ ಆದ ಡಾ. ಅಶ್ವತ್ಥ್ ನಾರಾಯಣ ಸಿ.ಎನ್. ಆ.30ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಆ.30ರಂದು ಬೆಳಗ್ಗೆ 10:50ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11:45ಕ್ಕೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಆಗಮಿಸು ವರು. ಮಧ್ಯಾಹ್ನ 12 ಗಂಟೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 2:30ಕ್ಕೆ ಕನ್ನಡ ಸಾಹಿತ್ಯ ದಿಗ್ಗಜರೊಂದಿಗೆ ಸಮಾಲೋಚನೆಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಐಟಿ-ಬಿಟಿ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3:45ಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ರಸ್ತೆ ಮೂಲಕ ಮುಡಿಪು ಗ್ರಾಮಕ್ಕೆ ತೆರಳುವರು. ಸಂಜೆ 4 ಗಂಟೆಗೆ ಮುಡುಪು ಗ್ರಾಮದಲ್ಲಿ ಮಾದರಿ ಸ್ವಸಹಾಯ ಸಂಘ ಕರುನಾಡು ಗ್ರಾಪಂಗೆ ಭೇಟಿ ನೀಡಲಿದ್ದಾರೆ.
ಸಂಜೆ 4:45ಕ್ಕೆ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡುವರು. ಸಂಜೆ 5:15ಕ್ಕೆ ಬಿಜೆಪಿ ಕಚೇರಿಗೆ ಭೇಟಿ ನೀಡುವರು. ಸಂಜೆ 5:45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ, ಅಲ್ಲಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.