varthabharthi


ರಾಷ್ಟ್ರೀಯ

ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ರಾಜೀನಾಮೆ

ವಾರ್ತಾ ಭಾರತಿ : 11 Sep, 2021

ಅಹ್ಮದಾಬಾದ್:‌ ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ndtv.com ವರದಿ ಮಾಡಿದೆ. 

ರೂಪಾನಿಯವರ ರಾಜೀನಾಮೆಗೆ ಕಾರಣವೇನೆಂಬುವುದು ಇನ್ನೂ ಸ್ಪಷ್ಟವಾಗಿಲ್ಲ. "ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ, ಗುಜರಾತ್‌ನ ಅಭಿವೃದ್ಧಿ ಪ್ರಧಾನಿಗಳ ಮಾರ್ಗದರ್ಶನದಲ್ಲಿ ನಡೆಯಬೇಕು" ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ವಿಜಯ್‌ ರೂಪಾನಿ ನಾಲ್ಕನೆಯವರಾಗಿದ್ದಾರೆ. ಜುಲೈನಲ್ಲಿ ಬಿ,ಎಸ್‌ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)