ದ.ಕ. ಜಿಲ್ಲೆ : ಕೋವಿಡ್ಗೆ ನಾಲ್ವರು ಬಲಿ; 133 ಮಂದಿಗೆ ಕೊರೋನ ಸೋಂಕು
ಮಂಗಳೂರು, ಸೆ.11: ದ.ಕ. ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ನಾಲ್ವರು ಮೃತಪಟ್ಟಿದ್ದು, 133 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ 343 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.1.35ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿನ 1,12,193 ಸೋಂಕಿತರ ಪೈಕಿ 1,08,771 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ.
ಕೋವಿಡ್ಗೆ ಇಲ್ಲಿಯವರೆಗೆ 1610 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 1812 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story