ಉಡುಪಿ: ಕೋವಿಡ್ ಗೆ ಮಹಿಳೆ ಬಲಿ; 87 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಸೆ.12: ರವಿವಾರ ಜಿಲ್ಲೆಯಲ್ಲಿ ಹೊಸದಾಗಿ 87 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ಇಂದು ಮಹಿಳೆಯೊಬ್ಬರು ಸೋಂಕಿಗೆ ಬಲಿಯಾದರೆ, 58 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ 1501ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಉಡುಪಿ ತಾಲೂಕಿನ 69 ವರ್ಷ ಪ್ರಾಯದ ಮಹಿಳೆ ಇಂದು ಸೋಂಕಿನಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ಗುಣಲಕ್ಷಣ, ನ್ಯುಮೋನಿಯಾದೊಂದಿಗೆ ಕಿಡ್ನಿ ಸಮಸ್ಯೆ, ಮಧುಮೇಹ ಹಾಗೂ ಇತರ ಸಮಸ್ಯೆಗಳಿಂದ ನರಳುತಿದ್ದ ಇವರನ್ನು ಆ.18ರಂದು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟರು.
ಇಂದು ಕೊರೋನ ಸೋಂಕು ದೃಢಪಟ್ಟ 87 ಮಂದಿಯಲ್ಲಿ 41 ಮಂದಿ ಪುರುಷರು ಹಾಗೂ 46 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 49 ಮಂದಿ ಉಡುಪಿ ತಾಲೂಕು, 20 ಮಂದಿ ಕುಂದಾಪುರ ಹಾಗೂ 14 ಮಂದಿ ಕಾರ್ಕಳ ತಾಲೂಕಿನವರು. ನಾಲ್ವರು ಹೊರಜಿಲ್ಲೆಯವರೂ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇವರಲ್ಲಿ 18 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 69 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಶನಿವಾರ 58 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 73,167ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3250 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 75,127ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 10,47,147 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.
1513 ಮಂದಿಗೆ ಲಸಿಕೆ ವಿತರಣೆ: ಜಿಲ್ಲೆಯಲ್ಲಿ ರವಿವಾರ 1513 ಮಂದಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 811 ಮಂದಿ ಮೊದಲ ಡೋಸ್ ಹಾಗೂ 702 ಮಂದಿ ಎರಡನೇ ಡೋಸ್ನ್ನು ಸ್ವೀಕರಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44ವರ್ಷದೊಳಗಿನ 557 ಮಂದಿ ಮೊದಲ ಹಾಗೂ 475 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 254 ಮಂದಿಗೆ ಮೊದಲ ಹಾಗೂ 227 ಮಂದಿಗೆ ಎರಡೇ ಡೋಸ್ ಲಸಿಕೆಯನ್ನು ನೀಡಲಾಗಿದೆ.
ರವಿವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 8,31,729 ಮಂದಿ ಮೊದಲ ಡೋಸ್ನ್ನು ಪಡೆದರೆ, 3,10,509 ಮಂದಿ ಎಡರೂ ಡೋಸ್ಗಳನ್ನು ಸ್ವೀಕರಿಸಿದ್ದಾರೆ.